Tuesday, October 15, 2013

Health benefits of Corn ( ಜೋಳ)

1. ಜೀರ್ಣಕ್ರಿಯೆ ಹೆಚ್ಚು ಮಾಡುತ್ತದೆ: ಜೋಳದಲ್ಲಿ ಅಧಿಕ ನಾರಿನಂಶವಿರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಅಲ್ಲದೆ ಜೋಳ ದೇಹಕ್ಕೆ ಸೇರಿದಾಗ ಅದು ಕರುಳಿನ ಕ್ಯಾನ್ಸರ್ ಕಾಯಿಲೆ ತಡೆಕಟ್ಟುವ ಸಾಮರ್ಥ್ಯ ಹೊಂದಿದೆ.

2. ಖನಿಜಾಂಶಗಳನ್ನು ಹೊಂದಿದೆ: ಜೋಳದಲ್ಲಿ ಅಧಿಕ ಮ್ಯಾಗ್ನಿಷಿಯಂ, ಕಬ್ಬಿಣ, ಸತು, ರಂಜಕ ಇರುವುದರಿಂದ ಮೂಳೆಗೆ ಒಳ್ಳೆಯದು. ಇದು ಮೂಳೆಯನ್ನು ಬಲಪಡಿಸುವುದು ಮಾತ್ರವಲ್ಲ, ಕಿಡ್ನಿ ಸರಿಯಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ.

3. ಯೌವನಭರಿತ ತ್ವಚೆ: ಜೋಳದಲ್ಲಿ antioxidants ಪ್ರಮಾಣ ಹೆಚ್ಚಾಗಿರುವುದರಿಂದ ತ್ವಚೆ ಬೇಗನೆ ಮುಪ್ಪಾಗದಂತೆ ಕಾಪಾಡುತ್ತದೆ. ಅಲ್ಲದೆ ಜೋಳದ ಎಣ್ಣೆಯನ್ನು ಹಚ್ಚಿಕೊಂಡರೆ ತ್ವಚೆ ಅಲರ್ಜಿ, ತ್ವಚೆಯಲ್ಲಿ ಕೆಂಪು ಗುಳ್ಳೆಗಳಾಗುವುದನ್ನು ತಡೆಯಬಹುದು. 

4. ರಕ್ತಹೀನತೆಯನ್ನು ತಡೆಗಟ್ಟುತ್ತದೆ: ಜೋಳದಲ್ಲಿ ವಿಟಮಿನ್ ಬಿ ಮತ್ತು ಫಾಲಿಕ್ ಆಸಿಡ್ ಅಂಶವಿರುವುದರಿಂದ ದೇಹದಲ್ಲಿ ರಕ್ತ ಹೆಚ್ಚಾಗಲು ಸಹಕಾರಿಯಾಗಿದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಉಂಟಾಗುವುದಿಲ್ಲ.

5. ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡುತ್ತದೆ: ಕೊಲೆಸ್ಟ್ರಾಲ್ ನಲ್ಲಿ 2 ವಿಧ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್. ಕೆಟ್ಟ ಕೊಲೆಸ್ಟ್ರಾಲ್ ದೇಹದಲ್ಲಿ ಹೆಚ್ಚಾದರೆ ದೇಹದ ತೂಕ ಹೆಚ್ಚಾಗುವುದು, ಒಬೆಸಿಟಿ ಸಮಸ್ಯೆ ಪ್ರಾರಂಭವಾಗುತ್ತದೆ. ಆದರೆ ಜೋಳದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಇದ್ದು ದೇಹದ ಆರೋಗ್ಯವನ್ನು ಹೆಚ್ಚು ಮಾಡುತ್ತದೆ. ಸ್ವೀಟ್ ಕಾರ್ನ್ ನಲ್ಲಿ ವಿಟಮಿನ್ ಸಿ, carotenoids ಮತ್ತು bioflavinoids ಅಂಶವಿರುವುದರಿಂದ ಹೃದ್ರೋಗ ಸಮಸ್ಯೆ ಇರುವವರಿಗೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. 

6. ಗರ್ಭೀಣಿಯರ ಆರೋಗ್ಯಕ್ಕೆ: ಗರ್ಭಿಣಿಯರ ಆರೋಗ್ಯಕ್ಕೆ ಜೋಳ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ಫಾಲಿಕ್ ಆಸಿಡ್ ಕೊರತೆಯನ್ನು ನೀಗಿಸಬಹುದು. ಫಾಲಿಕ್ ಆಸಿಡ್ ಕೊರತೆ ಉಂಟಾದರೆ ಗರ್ಭಿಣಿಯರಲ್ಲಿ ಕೈ ಕಾಲುಗಳಲ್ಲಿ ಊತ, ಅಧಿಕ ರಕ್ತದೊತ್ತಡ ಕಂಡು ಬರುತ್ತದೆ. ಕಡಿಮೆ ಫಾಲಿಕ್ ಆಸಿಡ್ ಇದ್ದರೆ ಕಡಿಮೆ ತೂಕದ ಮಗು ಹುಟ್ಟುತ್ತದೆ. ಆದ್ದರಿಂದ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಜೋಳ ತಿನ್ನುವುದು ಒಳ್ಳೆಯದು. ಕುರುಕಲು ತಿಂಡಿ ತಿನ್ನುವ ಬದಲು ಜೋಳದ ಸ್ನ್ಯಾಕ್ಸ್ ತಿನ್ನುವುದು ಒಳ್ಳೆಯದು. ಜೋಳದ ಅಡುಗೆ ಪ್ರತಿನಿತ್ಯ ತಿಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದಿಲ್ಲ. 

ಸಲಹೆ: * ಪಾಪ್ ಕಾರ್ನ್ ನಲ್ಲಿ ಹೆಚ್ಚು ಉಪ್ಪು ಹಾಕಿರುವುದರಿಂದ ಅದನ್ನು ತುಂಬಾ ತಿಂದರೆ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಆದ್ದರಿಂದ ಬೇಯಿಸಿದ ಜೋಳ ಅಥವಾ ಇತರ ಜೋಳದ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು. 

* ಮಿತಿಮೀರಿ ಪಾಪ್ ಕಾರ್ನ್ ಗಳನ್ನು ತಿನ್ನುವುದರಿಂದ ದಪ್ಪಗಾಗುವುದು. ಅದರ ಬದಲು ಜೋಳದ ರೊಟ್ಟಿ ಅಥವಾ ಉಪ್ಪಿಟ್ಟು ತಿಂದರೆ ಶರೀರದ ತೂಕವನ್ನು ಸಮತೋಲನದಲ್ಲಿಡಬಹುದು.

Health benefits of ಒಂದೆಲಗ

ಒಂದೆಲಗ ಅಥವಾ ಬ್ರಾಹ್ಮಿ ಔಷಧಿಯಾಗಿಯೂ ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ. ಹೆಸರೇ ಸೂಚಿಸುವಂತೆ ಒಂದೇ ಎಲೆಯಿಂದ ಕಂಗೊಳಿಸುತ್ತದೆ. ಇದು ನೆಲದಲ್ಲಿ ನೀರಿನ ಆಶ್ರಯವಿರುವಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಕರಾವಳಿ ಪರಿಸರದಲ್ಲಿ ಭತ್ತದ ಗದ್ದೆಗಳ ಬದಿಯ ಜೌಗು ಪ್ರದೇಶದಲ್ಲಿ, ಅಡಿಕೆತೋಟಗಳಲ್ಲೂ ಹೇರಳವಾಗಿ ಬೆಳೆಯುತ್ತದೆ. ಕಾಂಡವು ನೆಲದ ಮೇಲೆ ಬಳ್ಳಿಯಂತೆ ಹರಡಿಕೊಂಡು ೩,೪ ಅಂಗುಲ ಎತ್ತರಕ್ಕೆ ಬೆಳೆಯುತ್ತದೆ.ಎಲೆಗಳು ಹಸಿರು ಬಣ್ಣದಿಂದ ಕೂಡಿ ದುಂಡಗಾಗಿರುತ್ತವೆ.

ಸಂಸ್ಕೃತದಲ್ಲಿ ಮಂಡೂಕಪರ್ಣಿ, ಕನ್ನಡದಲ್ಲಿ ಒಂದೆಲಗ, ತುಳುವಿನಲ್ಲಿ ತಿಮಾರೆ, ಹಿಂದಿಯಲ್ಲಿ ಬ್ರಾಹ್ಮೀ, ತೆಲುಗಿನಲ್ಲಿ ಸರಸ್ವತೀ... ಇತ್ಯಾದಿ ಹೆಸರುಗಳು ಈ ಪುಟ್ಟ ಸಸ್ಯಕ್ಕೆ. ಸುಶ್ರುತ ಸಂಹಿತೆಯಲ್ಲಿಯೂ ಇದರ ಉಲ್ಲೇಖವಿದೆ.

*ಕೆಮ್ಮು, ಉಸಿರಾಟದ ತೊಂದರೆ ಇರುವವರಿಗೆ ಇದರ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ಸೇವಿಸುತ್ತಾರೆ.ಒಂದೆಲಗ ಸೇವನೆ ದೇಹಕ್ಕೆ, ಮನಸ್ಸಿಗೆ ತಂಪು ತರುವುದು ಮಾತ್ರವಲ್ಲದೆ ಸ್ಮರಣಶಕ್ತಿಯನ್ನೂ ವರ್ಧಿಸುತ್ತದೆ ಎಂಬ ನಂಬಿಕೆಯಿದೆ.ಇದು ನಿತ್ಯ ತಿಂದರೆ ಬುದ್ಧಿ ಚುರುಕಾಗುತ್ತದೆ. ಮಕ್ಕಳಿಗೆ ಬೆಳಗ್ಗೆ ಇದರ ಎರಡೆರಡು ಎಲೆಗಳನ್ನು ತಿನ್ನಲು ಕೊಡುವುದರಿಂದ ಮಕ್ಕಳ ಜ್ಞಾಪಕಶಕ್ತಿ ಹೆಚ್ಚುತ್ತದೆ. ದಿನಕ್ಕೆ 4 -5 ಎಲೆ ಸೇವಿಸುವುದರಿಂದ ಮಾತಿನ ಉಗ್ಗುವಿಕೆ ಇಲ್ಲವಾಗುವುದು.ಮಲ ಬದ್ದತೆಯಿಂದ ಬಳಲುವವರು ಒಂದೆಲಗದ ಸೊಪ್ಪಿನಿಂದ ತಯಾರಿಸಿದ ಪಲ್ಯ ಅಥವಾ ಚಟ್ನಿ ಸೇವಿಸುತ್ತಾರೆ.

* ದಿನಕ್ಕೆ 4-5 ಒಂದೆಲಗದ ಎಲೆಯನ್ನು ಸೇವಿಸುವುದರಿಂದ ಮಾತಿನ ಉಗ್ಗುವಿಕೆ ಇಲ್ಲವಾಗುವುದು. 

* ಮಲಬದ್ಧತೆಯಿಂದ ಬಳಲುವವರು ಒಂದೆಲಗದ ಸೊಪ್ಪಿನಿಂದ ತಯಾರಿಸಿದ ಪಲ್ಯ ಅಥವಾ ಚಟ್ನಿ ಸೇವಿಸುತ್ತಾರೆ.

* ಬೇಸಿಗೆಯಲ್ಲಿ ದೇಹ ತಂಪಾಗಿಸಲು ಊಟದೊಂದಿಗೆ ಒಂದೆಲಗದ ಚಟ್ನಿ ಸೇವಿಸುವುದು ಆರೋಗ್ಯಕ್ಕೆ ಹಿತಕರ.

* ನಿದ್ರಾಹೀನತೆಯಿಂದ ಬಳಲುತ್ತಿರುವವರು ಒಂದೆಲಗದಿಂದ ತಯಾರಿಸಿದ ಗುಳಿಗೆಗಳನ್ನು ಸೇವಿಸಿದರೆ ಸುಖ ನಿದ್ದೆಯನ್ನು ನಮ್ಮದಾಗಿಸಿಕೊಳ್ಳಬಹದು. (ಒಂದೆಲಗದ ಎಲೆಗಳನ್ನು ಒಣಗಿಸಿ ಪುಡಿಮಾಡಿ ಅದರೊಂದಿಗೆ ಹುರಿದ ಗಸೆಗಸೆಯನ್ನು ಬೆರೆಸಬೇಕು, ಬಳಿಕ ಕಲ್ಲುಸಕ್ಕರೆಯ ಎಳೆಪಾಕ ಮಾಡಿ ಅದರಲ್ಲಿ ಈ ಮಿಶ್ರಣವನ್ನು ಬೆರೆಸಿ ಚೆನ್ನಾಗಿ ಕಲಕಬೇಕು ನಂತರ ತುಪ್ಪವನ್ನು ಸೇರಿಸಿ ಗಟ್ಟಿಯಾಗುತ್ತಲೇ ಒಲೆಯಿಂದ ಕೆಳಗಿಳಿಸಬೇಕು. ಮಿಶ್ರಣವು ಆರಿದ ಬಳಿಕ ಅಂದಾಜು ಗಾತ್ರದ ಗುಳಿಗೆಯನ್ನು ತಯಾರಿಸಬೇಕು. ನಿತ್ಯವೂ ಮಲಗುವ ಮುನ್ನ ಇದನ್ನು ಸೇವಿಸಿ ಹಾಲು ಕುಡಿದು ಮಲಗಿದರೆ ನಿದ್ರಾಹೀನತೆ ನಿವಾರಣೆಯಾಗುತ್ತದೆ.)

* ಒಂದೆಲಗದ ತೈಲವೂ ನಿದ್ರಾಹೀನತೆಗೆ ಪರಿಣಾಮಕಾರಿ. ಒಂದೆಲಗದ ತೈಲದಿಂದ ನಿತ್ಯವೂ ಶಿರೋಭಾಗವನ್ನು ಮಾಲೀಶು ಮಾಡಿ ಮಲಗಿದರೆ ಹಿತಕರ.(ಒಂದೆಲಗದ ರಸ ಒಂದು ಕಪ್‌, ಅಷ್ಟೇ ಪ್ರಮಾಣದಲ್ಲಿ ಎಳ್ಳೆಣ್ಣೆ ಅಥವಾ ಕೊಬ್ಬರಿ ಎಣ್ಣೆ ತೆಗೆದುಕೊಳ್ಳಬೇಕು. ಎರಡನ್ನೂ ಬೆರೆಸಿ ಸಣ್ಣ ಉರಿಯಲ್ಲಿ ಕುದಿಸಿ ನೀರಿನ ಅಂಶ ಇಂಗುವವರೆಗೆ ಕಾಯಿಸಬೇಕು. ಈ ತೈಲ ನಿತ್ಯ ಹಚ್ಚಿದರೆ "ಕೇಶ್ಯ'ವೂ ಹೌದು-ಅಂದರೆ ಕೂದಲು ಸೊಂಪಾಗಿ ಬೆಳೆಯುತ್ತದೆ, ಹೊಟ್ಟು ನಿವಾರಣೆಯಾಗುತ್ತದೆ.)

* ನರದೌರ್ಬಲ್ಯ, ಆತಂಕ, ಒತ್ತಡ ನಿವಾರಣೆಗೆ ಹಾಗೂ ತಲೆನೋವು ನಿವಾರಣೆಯಾಗಲು ಒಂದೆಲಗದ ಕಷಾಯ ಹಿತಕರ. ಒಂದೆಲಗದ ಎಲೆಗಳನ್ನು ಒಂದು ಮುಷ್ಟಿಯಷ್ಟು ತೆಗೆದುಕೊಂಡು ಚೆನ್ನಾಗಿ ಅರೆದು ನೀರು ಸೇರಿಸಿ ಕುದಿಸಬೇಕು. ಆರಿದ ಬಳಿಕ ಜೇನು ಹಾಗೂ ಮೆಣಸಿನಕಾಳಿನ ಹುಡಿ ಬೆರೆಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಹಿತಕರ.

*ಅಪೌಷ್ಟಿಕತೆ ಹಾಗೂ ಪಿತ್ತದೋಷದ ದೃಷ್ಟಿಯಿಂದ ಅಧಿಕ ಕೂದಲು ಉದುರುವವರು ಒಂದೆಲಗದ ಕಾಂಡ ಸಹಿತ ಇಡೀ ಬಳ್ಳಿಯನ್ನು ತೊಳೆದು ಅರೆದು ಅದರ ರಸವನ್ನು ಸ್ವಲ್ಪ ಜೇನು ಮತ್ತು ಹಸುವಿನ ತುಪ್ಪ ಬೆರೆಸಿ ನಿತ್ಯ ಖಾಲಿಹೊಟ್ಟೆಯಲ್ಲಿ ಸೇವಿಸಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ಕಡಿಮೆಯಾಗುತ್ತದೆ. ಇದೇ ಸಮಯದಲ್ಲಿ ಒಂದೆಲಗದ ತೈಲವನ್ನು ಕೂದಲಿಗೆ ಲೇಪಿಸುವುದೂ ಹಿತಕರ.

*ಮಕ್ಕಳಿಗೆ ಉಪಯುಕ್ತ ಆರೋಗ್ಯವರ್ಧಕ ಪೇಯಗಳು. ಚಹಾ ಕಾಫಿಯ ಬದಲಾಗಿ, ಈ ರುಚಿಕರ ಪೇಯವನ್ನು ನೀಡಿದರೆ ಮಕ್ಕಳ ದೈಹಿಕ ಮಾನಸಿಕ ಬೆಳವಣಿಗೆಗೆ ಹಿತಕರ.
(ಒಂದು ಕಪ್‌ ಹಸುವಿನ ತುಪ್ಪಕ್ಕೆ ಅಷ್ಟೇ ಪ್ರಮಾಣದಲ್ಲಿ ಒಂದೆಲಗದ ಎಲೆಯ ರಸವನ್ನು ಬೆರೆಸಿ ಸಣ್ಣ ಉರಿಯಲ್ಲಿ ಕುದಿಸಬೇಕು. ನೀರಿನ ಅಂಶ ಆರಿಬರುತ್ತಲೇ "ಪಟಪಟ' ಸದ್ದು ನಿಂತು, ತುಪ್ಪ ಮತ್ತು ಒಂದೆಲಗದ ರಸದ ಘೃತಪಾಕವು ಉಂಟಾಗುತ್ತದೆ. ಈ ತುಪ್ಪದ ನಿತ್ಯಸೇವನೆ ಮನಸ್ಸಿನ ದುಗುಡ, ಆತಂಕ, ಖನ್ನತೆಗಳನ್ನು ನಿವಾರಿಸಿ ಮನಸ್ಸನ್ನು ಶಾಂತಗೊಳಿಸುವುದು. ಸ್ಮರಣಶಕ್ತಿ, ಬುದ್ಧಿಶಕ್ತಿ ಪ್ರಚೋದಕ. 1-2 ಚಮಚದಷ್ಟು ಈ ತುಪ್ಪವನ್ನು (ಮಕ್ಕಳ ಅಥವಾ ವಯಸ್ಕರ ವಯಸ್ಸಿಗೆ ತಕ್ಕಂತೆ) ಬಿಸಿ ಹಾಲಲ್ಲಿ ಬೆರೆಸಿ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸಿದರೆ ಪರಿಣಾಮಕಾರಿ.)

* ಒಂದೆಲಗದ ಎಲೆಗಳನ್ನು ತೊಳೆದು, ನೆರಳಲ್ಲಿ ಒಣಗಿಸ ಬೇಕು. ಅಷ್ಟೇ ಪ್ರಮಾಣದ ಬಾದಾಮಿಯನ್ನು ಹುರಿದು ಇಡಬೇಕು. ಬಳಿಕ ಎರಡನ್ನೂ ಮಿಕ್ಸರ್‌ನಲ್ಲಿ ಪುಡಿಮಾಡಿ, ಸ್ವಲ್ಪ ಯಾಲಕ್ಕಿ ಹುಡಿ, ಶುದ್ಧ ಕೇಸರಿ ದಳಗಳನ್ನು ಬೆರೆಸಬೇಕು. ಈ ಪುಡಿಯನ್ನು 2 ಚಮಚದಷ್ಟು 1 ಕಪ್‌ ಹಾಲಿಗೆ ಬೆರೆಸಿ ಸ್ವಲ್ಪ ಕಲ್ಲುಸಕ್ಕರೆ ಅಥವಾ ಬೆಲ್ಲ ಬೆರೆಸಿ ನೀಡಬೇಕು. ಕಾದಾರಿದ ಹಾಲು ಅಥವಾ ತಂಪಾದ ಹಾಲಿಗೆ ಈ ಪುಡಿಯನ್ನು ಬೆರೆಸುವುದಾದರೆ ಕಲ್ಲುಸಕ್ಕರೆ ಅಥವಾ ಬೆಲ್ಲದ ಬದಲು ತಾಜಾ ಜೇನುತುಪ್ಪ ಬೆರೆಸಬಹುದು. ನಿತ್ಯ ಬೆಳಿಗ್ಗೆ ಈ ಪೇಯ ಬೆಳೆಯುವ ಮಕ್ಕಳಿಗೆ ನೀಡಿದರೆ ಉತ್ತಮ ಆರೋಗ್ಯವರ್ಧಕ ಪೇಯ.

ನಿದ್ದೆ ಗುಳಿಗೆ ತಯಾರಿಸುವ ವಿಧಾನ :

ಹಾಂ, ಆಧುನಿಕ ಜೀವನಶೈಲಿಯ ಒತ್ತಡ ಧಾವಂತಗಳು ನಿದ್ರಾಹೀನತೆಯನ್ನು ಹೆಚ್ಚಿಸಿವೆ. ಮನೆಯ ಅಂಗಳದ ಒಂದೆಲಗವನ್ನು ಉಪಯೋಗಿಸಿ ಗುಳಿಗೆ ತಯಾರಿಸಿ ಸೇವಿಸಿದರೆ ಸವಿನಿದ್ದೆ ಸಹಜವಾಗಿಯೇ ಉಂಟಾಗುತ್ತದೆ!

ಒಂದೆಲಗದ ಎಲೆಗಳನ್ನು ಒಣಗಿಸಿ ಪುಡಿಮಾಡಿ ಅದರೊಂದಿಗೆ ಹುರಿದ ಗಸೆಗಸೆಯನ್ನು ಬೆರೆಸಬೇಕು, ಬಳಿಕ ಕೆಂಪು ಕಲ್ಲುಸಕ್ಕರೆಯ ಎಳೆಪಾಕ ಮಾಡಿ ಅದರಲ್ಲಿ ಈ ಮಿಶ್ರಣವನ್ನು ಬೆರೆಸಿ ಚೆನ್ನಾಗಿ ಕಲಕಬೇಕು. ಕೊನೆಯಲ್ಲಿ ಹಸುವಿನ ತುಪ್ಪ ಸ್ವಲ್ಪ ಸೇರಿಸಿ ಗಟ್ಟಿಯಾಗುತ್ತಲೇ ಒಲೆಯಿಂದ ಕೆಳಗಿಳಿಸಬೇಕು.

ಈ ಮಿಶ್ರಣವು ಆರಿದ ಬಳಿಕ ಗಜ್ಜುಗದ ಗಾತ್ರದ ಗುಳಿಗೆಯನ್ನು ತಯಾರಿಸಬೇಕು. ನಿತ್ಯವೂ ಈ ಗುಳಿಗೆಯನ್ನು ಸೇವಿಸಿ ಹಾಲು ಕುಡಿದು ಮಲಗಿದರೆ ನಿದ್ರಾಹೀನತೆ ನಿವಾರಣೆಯಾಗುತ್ತದೆ. 

.ನಿದ್ರಾಹೀನತೆಯಲ್ಲಿ ಒಂದೆಲಗದ ತೈಲವೂ ಪರಿಣಾಮಕಾರಿ. ಒಂದೆಲಗದ ಗುಳಿಗೆಯನ್ನು ಸೇವಿಸುವುದರ ಜೊತೆಗೆ, ಒಂದೆಲಗದ ತೈಲದಿಂದ ನಿತ್ಯವೂ ಶಿರೋಭಾಗವನ್ನು ಮಾಲೀಶು ಮಾಡಿ ಮಲಗಿದರೆ ಹಿತಕರ.

ಒಂದೆಲಗದ ತೈಲ ತಯಾರಿಸುವ ವಿಧಾನ  :

ಒಂದೆಲಗದ ರಸ ಒಂದು ಕಪ್‌, ಅಷ್ಟೇ ಪ್ರಮಾಣದಲ್ಲಿ ಎಳ್ಳೆಣ್ಣೆ ಅಥವಾ ಕೊಬ್ಬರಿ ಎಣ್ಣೆ ತೆಗೆದುಕೊಳ್ಳಬೇಕು. ಎರಡನ್ನೂ ಬೆರೆಸಿ ಸಣ್ಣ ಉರಿಯಲ್ಲಿ ಕುದಿಸಿ ನೀರಿನ ಅಂಶ ಇಂಗುವವರೆಗೆ ಕಾಯಿಸಬೇಕು. ಈ ತೈಲವನ್ನು ನಿತ್ಯ ಕೂದಲಿಗೆ ಲೇಪಿಸಿ, ತುದಿ ಬೆರಳಿನಿಂದ ಮಾಲೀಶು ಮಾಡಿದರೆ ಶಿರೋಭಾಗದಲ್ಲಿ ರಕ್ತ ಸಂಚಾರ ವೃದ್ಧಿಯಾಗುತ್ತದೆ. ಮನಸ್ಸೂ ಪ್ರಶಾಂತವಾಗಿ ನಿದ್ರಾಹೀನತೆ ನಿವಾರಣೆಯಾಗುತ್ತದೆ. ಈ ತೈಲ ನಿತ್ಯ ಹಚ್ಚಿದರೆ "ಕೇಶ್ಯ'ವೂ ಹೌದು-ಅಂದರೆ ಕೂದಲು ಸೊಂಪಾಗಿ ಬೆಳೆಯುತ್ತದೆ, ಹೊಟ್ಟು ನಿವಾರಣೆಯಾಗುತ್ತದೆ.

.ನರದೌರ್ಬಲ್ಯ, ಆತಂಕ, ಒತ್ತಡ ನಿವಾರಣೆಗೆ ಹಾಗೂ ತಲೆನೋವು ನಿವಾರಣೆಯಾಗಲು ಒಂದೆಲಗದ ಕಷಾಯ ಹಿತಕರ. ಒಂದೆಲಗದ ಎಲೆಗಳನ್ನು ಒಂದು ಮುಷ್ಟಿಯಷ್ಟು ತೆಗೆದುಕೊಂಡು ಚೆನ್ನಾಗಿ ಅರೆದು ನೀರು ಸೇರಿಸಿ ಕುದಿಸಬೇಕು. ಆರಿದ ಬಳಿಕ ಜೇನು ಹಾಗೂ ಮೆಣಸಿನಕಾಳಿನ ಹುಡಿ ಬೆರೆಸಿ ದಿನಕ್ಕೆ 2-3 ಬಾರಿ ಸೇವಿಸಿದರೆ ಹಿತಕರ.

.ಹಾಲಿನಲ್ಲಿ ಜೀರಿಗೆಪುಡಿ ಹಾಗೂ ಒಣಗಿಸಿ ಹುಡಿಮಾಡಿದ ಒಂದೆಲಗದ ಪುಡಿಯನ್ನು ಬೆರೆಸಿ ಸೇವಿಸಿದರೆ ಬಾಣಂತಿಯಲ್ಲಿ ಎದೆಹಾಲು ವೃದ್ಧಿಯಾಗುತ್ತದೆ.

.ಮೂತ್ರ ಉರಿ, ಮೂತ್ರಕಟ್ಟು ಉಂಟಾದಾಗ ಒಂದು ಕಪ್‌ ಎಳನೀರಿನಲ್ಲಿ 4 ಚಮಚ ಒಂದೆಲಗದ ರಸ, ಅರ್ಧ ಚಮಚ ಕೊತ್ತಂಬರಿ ಬೀಜದ ಹುಡಿ ಬೆರೆಸಿ ಕುಡಿದರೆ ಶಮನಕಾರಿ.

.ಅಪೌಷ್ಟಿಕತೆ ಹಾಗೂ ಪಿತ್ತದೋಷದ ದೃಷ್ಟಿಯಿಂದ ಅಧಿಕ ಕೂದಲು ಉದುರುವವರು ಒಂದೆಲಗದ ಕಾಂಡ ಸಹಿತ ಇಡೀ ಬಳ್ಳಿಯನ್ನು ತೊಳೆದು ಅರೆದು ಅದರ ರಸವನ್ನು ಸ್ವಲ್ಪ ಜೇನು ಮತ್ತು ಹಸುವಿನ ತುಪ್ಪ ಬೆರೆಸಿ ನಿತ್ಯ ಖಾಲಿಹೊಟ್ಟೆಯಲ್ಲಿ ಸೇವಿಸಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ಕಡಿಮೆಯಾಗುತ್ತದೆ. ಇದೇ ಸಮಯದಲ್ಲಿ ಒಂದೆಲಗದ ತೈಲವನ್ನು ಕೂದಲಿಗೆ ಲೇಪಿಸುವುದೂ ಹಿತಕರ.